ಬೆಂಗಳೂರು, ಆ.31 : ಕೋವಿಡ್ ಹರಡುವಿಕೆ ತಡೆಯುವ ಉದ್ದೇಶದಿಂದ ಗಡಿ ಭಾಗಗಳಲ್ಲಿ ಬಿಗಿಯಾದ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳ ಗಡಿ ಭಾಗಗಳಲ್ಲಿ ರಾಜ್ಯಕ್ಕೆ ಆಗಮಿಸುವವರಿಗೆ ಒಂದು ವಾರ ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುವುದು. ಅದೇ ರೀತಿ ವಿಮಾನ ನಿಲ್ದಾಣದ ಮೂಲಕ ಬರುವವರನ್ನು ಕೂಡ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್ಗೆ ಒಳಪಡಿಸಲಾಗುವುದು ಎಂದು ಹೇಳಿದರು. ಜನಜಂಗುಳಿ ಹೆಚ್ಚಾದರೆ