ಮಹಾನಗರ ಪಾಲಿಕೆಯಲ್ಲಿನ ಭ್ರಷ್ಟಾಚಾರ ಮತ್ತೊಮ್ಮೆ ಬಯಲಿಗೆ ಬಿದ್ದಿದ್ದು, ಕಮಿಷನರ್ ಪಿಎ ಎಸಿಬಿ ಬಲೆಗೆ ಬಿದ್ದಿದ್ದಾರೆ. ಖಾಸಗಿ ಶಾಲೆಯೊಂದಕ್ಕೆ ಫಾರಂ2 ನೀಡಲು 50 ಸಾವಿರ ರೂ. ಲಂಚ ಪಡೆದ ಬಳ್ಳಾರಿ ನಗರದ ಮಹಾನಗರ ಪಾಲಿಕೆ ಆಯುಕ್ತರ ಆಪ್ತ ಸಹಾಯಕ ಮತ್ತು ಅಟೆಂಡರ್ ಭ್ರಷ್ಟಾಚಾರ ನಿಗ್ರಹ ದಳ ಬೀಸಿದ ಬಲೆಗೆ ಬಿದ್ದಿದ್ದಾರೆ.ಖಾಸಗಿ ಶಾಲೆ ಆಡಳಿತ ಮಂಡಳಿ ಅವರ ಪರವಾಗಿ ಚಂದ್ರಶೇಖರ್ ಎಂಬವರು ಕಳೆದ ಜುಲೈನಲ್ಲಿ ಫಾರಂ 2 ನೀಡಲು ಕೋರಿ ಅರ್ಜಿ ಸಲ್ಲಿಸಿದ್ದರು.