ಹುಬ್ಬಳ್ಳಿ : ವಿಧಾನಸೌಧದ ವೆಸ್ಟ್ ಗೇಟ್ ನಲ್ಲಿ 25.76 ಲಕ್ಷ ರೂ.ಜಪ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,ವಿಧಾನಸೌಧದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. 25.76 ಲಕ್ಷ ರೂ.ಜಪ್ತಿ ಇದಕ್ಕೆ ಉದಾಹರಣೆ ಎಂದು ಹೇಳಿದ್ದಾರೆ. ಹಾಗೇ ದೋಸ್ತಿ ಸರ್ಕಾರದಲ್ಲಿ ಭುಗಿಲೆದ್ದ ಅಸಮಾಧಾನದ ಬಗ್ಗೆ ಮಾತನಾಡಿದ ಅವರು ಮೈತ್ರಿ ಸರ್ಕಾರದಲ್ಲಿ ಭಿನ್ನಾಭಿಪ್ರಾಯಗಳು ಹೆಚ್ಚುತ್ತಲೇ ಇವೆ. ಕಾಂಗ್ರೆಸ್ ಜೆಡಿಎಸ್ ನಲ್ಲಿ ಹಲವು ಗೊಂದಲಗಳಿವೆ