ಹುಬ್ಬಳ್ಳಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಮಗಳ ಮದುವೆಯ ಎಲ್ಲಾ ಖರ್ಚು-ವೆಚ್ಚದ ದಾಖಲೆಗಳನ್ನು ಸರಕಾರಕ್ಕೆ ನೀಡಲಾಗುವುದು ಎಂದು ಸಂಸದ ಶ್ರೀರಾಮುಲು ತಿಳಿಸಿದ್ದಾರೆ. ಶನಿವಾರ ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಅವರು, ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹಾಗೂ ಇನ್ನಿತರರು ಜನಾರ್ದನ ರೆಡ್ಡಿ ಅವರ ಪುತ್ರಿ ಬ್ರಹ್ಮಿಣಿ ಅವರ ವಿವಾಹದ ದುಂದು ವೆಚ್ಚದ ಕುರಿತು ಮೇಲಿಂದ ಮೇಲೆ ಪ್ರಶ್ನೆ ಮಾಡುತ್ತಿದ್ದಾರೆ. ಯಾರೊಬ್ಬರ ಮದುವೆ ಹಾಗೂ