ಬೆಂಗಳೂರು : ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ವಿರುದ್ಧ ದೊಡ್ಡರಾಯಪ್ಪನಹಳ್ಳಿ ಗ್ರಾಮಸ್ಥರ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡರಾಯಪ್ಪನಹಳ್ಳಿಯಲ್ಲಿ ಶಾಲಾ ಕಟ್ಟಡ ಕಾಮಗಾರಿ ವಿಚಾರವಾಗಿ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ. ಸರ್ಕಾರಿ ಅನುಮೋದನೆ ಸಿಗದಿದ್ರೂ ಗ್ರಾಮ ಪಂಚಾಯಿತಿ ಅಧ್ಯಕ್ಷನ ಮನೆಗೆ ದಾರಿ ಬಿಡದೆ ಕಟ್ಟಡ ನಿರ್ಮಾಣ ಮಾಡಿದ್ದು, ಈ ವಿಚಾರವಾಗಿ ಕೇಳಲು ಹೋದ ಗ್ರಾಮ ಪಂಚಾಯಿತಿ ಅಧ್ಯಕ್ಷ, ಗ್ರಾಮಸ್ಥರನ್ನು