ಮೊದಲ ಹಂತದ ಮೆಟ್ರೋ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದ್ದು ಇಂದು ಸಂಜೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಏಷ್ಯಾದಲ್ಲಿಯೇ ಅತಿ ದೊಡ್ಡ ಮೆಟ್ರೋ ಸ್ಟೇಶನ್ ಉದ್ಘಾಟಿಸಲಿದ್ದಾರೆ. ನಗರಕ್ಕೆ ಆಗಮಿಸಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ರಾಜಭವನದಿಂದ ಸಂಜೆ 6 ಗಂಟೆಗೆ ವಿಧಾನಸೌಧಕ್ಕೆ ಆಗಮಿಸಲಿದ್ದು ಸಂಜೆ 7 ಗಂಟೆಗೆ ಮೊದಲ ಹಂತದ ಮೆಟ್ರೋಗೆ ಚಾಲನೆ ನೀಡಲಿದ್ದಾರೆ. ರಾಷ್ಟ್ರಪತಿ ಮುಖರ್ಜಿ ವಿಧಾನಸೌಧಕ್ಕೆ ಆಗಮಿಸುತ್ತಿರುವುದರಿಂದ ಭಾರಿ ಭದ್ರತೆಯೊಂದಿಗೆ ಪೊಲೀಸರ ಸರ್ಪಗಾವಲು ಹಾಕಲಾಗಿದೆ. ಹೆಚ್ಚುವರಿ ಪೊಲೀಸ್ ಆಯುಕ್ತೆ