AICC ಅಧ್ಯಕ್ಷರಾದ ಬಳಿಕ ರಾಜ್ಯಕ್ಕೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆಯವರಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಮಲ್ಲಿಕಾರ್ಜುನ್ ಖರ್ಗೆ ಅವರನ್ನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಕೈ’ ನಾಯಕರು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. KPCC ಅಧ್ಯಕ್ಷ D.K.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, U.T.ಖಾದರ್, ಈಶ್ವರ್ ಖಂಡ್ರೆ ಸೇರಿ ಹಲವರಿಂದ ಖರ್ಗೆಗೆ ಸ್ವಾಗತ ಕೋರಲಾಯಿತು. ಇಂದು ಮಧ್ಯಾಹ್ನ 2.30ಕ್ಕೆ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಸರ್ವೋದಯ ಸಮಾವೇಶ ನಡೆಯಲಿದೆ. ಸರ್ವೋದಯ ಸಮಾವೇಶದಲ್ಲಿ 50 ಸಾವಿರ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.