ನಿನ್ನೆ ನಡೆದ ವಿಧಾನಪರಿಷತ್ ನಾಲ್ಕು ಸ್ಥಾನಗಳ ಚುನಾವಣೆಯ ಮತ ಎಣಿಕೆ ಕಾರ್ಯ ನಾಳೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನಿನ್ನೆ ಮತದಾನ ನಡೆದಿದ್ದು ನಾಳೆ ಫಲಿತಾಂಶ ಹೊರಬೀಳಲಿದೆ. ದಕ್ಷಿಣ ಪದವೀಧರರ ಚುನಾವಣೆ ಮತ ಎಣಿಕೆಗೆ ಸಜ್ಜಾಗಿದ್ದು ಈ ಕುರಿತು ಇಂದು ಪ್ರಾದೇಶಿಕ ಆಯುಕ್ತ ಹಾಗೂ ಚುನಾವಣಾಧಿಕಾರಿ ಪ್ರಕಾಶ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ನಾಳೆ ಬೆಳಿಗ್ಗೆ 8ರಿಂದ ಮತ ಎಣಿಕೆ ಪ್ರಾರಂಭವಾಗಲಿದೆ. ಮೊದಲ