ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಈ ನಡುವೆ ಇಂದು ಸಿಂಹಾಸನ ಜೋಡಣಾ ಕಾರ್ಯ ಹಿನ್ನೆಲೆ ಅರಮನೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆವರಗೆ ಅರಮನೆಗೆ ಸಾರ್ವಜನಿಕರ ಪ್ರವೇಶ ಬಂದ್ ಮಾಡಲಾಗಿದೆ. ರತ್ನಖಚಿತ ಸಿಂಹಾಸನ ಜೋಡಣಾ ಕಾರ್ಯ ಆರಂಭವಾಗಿದ್ದು ಸ್ಟ್ರಾಂಗ್ ರೂಂನಲ್ಲಿರುವ ಸಿಂಹಾಸನ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಜೋಡಣೆ ಮಾಡಲಾಗುತ್ತಿದೆ.ದರ್ಬಾರ್ ಹಾಲ್ನಲ್ಲಿ ಪೂಜಾ ಕೈಂಕರ್ಯ ನೆರವೇರಿದ್ದು, ಕನ್ನಡಿ ತೊಟ್ಟಿಯಲ್ಲಿ ಭದ್ರಾಸನ ಜೋಡಣೆ,