ಕರುನಾಡ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಸಿದ್ದತೆಗಳು ಭರದಿಂದ ನಡೆಯುತ್ತಿವೆ. ವರ್ಷಕ್ಕೊಮ್ಮೆ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ದೇಶದ ವಿವಿಧೆಡೆಗಳಿಂದ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸಲಿದ್ದು, ಇದಕ್ಕಾಗಿ ತಲಕಾವೇರಿ ಹಾಗೂ ತ್ರಿವೇಣಿ ಸಂಗಮ ಭಾಗಮಂಡಲ ಸಕಲ ರೀತಿಯಲ್ಲಿ ಸಿದ್ದತೆ ನಡೆಯುತ್ತಿದೆ.. ಕೊಡವರ ಕುಲದೇವತೆ ಕರ್ನಾಟಕದ ಜೀವನದಿ ಕಾವೇರಿಯ ತೀರ್ಥೋದ್ಭಕಕ್ಕೆ ಜಿಲ್ಲಾಡಳಿತ ಕೂಡ ಈಗಾಗಲೇ ತಯಾರಿ ಮಾಡಿಕೊಂಡಿದೆ. ಇಂದು ಸಂಜೆ 7 ಗಂಟೆ 21 ನಿಮಿಷಕ್ಕೆ ಮೇಷ