ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ವ್ಯಕ್ತಿಯನ್ನು ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಖಿಲ್ ಜಾರ್ಜ್ ಎಂಬ ಬಂಧಿತ ಆರೋಪಿಯಿಂದ 22 ಸಾವಿರ ಖೋಟಾ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ.