ಕೇಂದ್ರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರಕಾರ ಅಡಳಿತಕ್ಕೆ ಬಂದ ನಂತರ ದೇಶದ ಆರ್ಥಿಕತೆ ಸರ್ವನಾಶವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದ ಅವಧಿಯಲ್ಲಿ ದೇಶದ ಆರ್ಥವ್ಯವಸ್ಥೆ ಸಧೃಡವಾಗಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದೇಶದ ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿಯವರು ಗಾಂಧಿ ತತ್ವ ಸಿದ್ಧಾಂತಗಳ ವಿರುದ್ಧ ಹೋಗುತ್ತಿದ್ದಾರೆ. ಬಿಜೆಪಿ ನಾಯಕರು ಮನಸುಗಳು ಮೊದಲು ಸ್ವಚ್ಚವಾಗಬೇಕು.