ಕೋಮು ಪ್ರಚೋದನೆ ಭಾಷಣ ಮಾಡಿದ ಪ್ರಕರಣದಲ್ಲಿ ಆಂದೋಲದ ಕರುಣೇಶ್ವರ ಮಠದ ಪೀಠಾಧಿಪತಿ ಹಾಗೂ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಭಾಷಣ ಮಾಡಿದ್ದ ಆರೋಪದ ಮೇಲೆ 2015ರಲ್ಲಿ ಆಂದೋಲಾ ಶ್ರೀ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕಣಕ್ಕೆ ಸಂಬಂಧಿಸಿದಂತೆ ಇಂದು ಯಾದಗಿರಿಯ ಸಿವಿಲ್ ಕೋರ್ಟ್ ನ್ಯಾಯಾಧೀಶ ರವೀಂದ್ರ ಹೊನೋಲೆ ಅವರು, ಸಿದ್ದಲಿಂಗ ಸ್ವಾಮಿಯನ್ನು ದೋಷಿ ಎಂದು ತೀರ್ಪು ನೀಡಿದರು.