ಬೆಂಗಳೂರು: ಶಾಲೆಯಲ್ಲೇ ಆರು ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕನಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.2014 ರ ಅಕ್ಟೋಬರ್ ನಲ್ಲಿ ಪ್ರಕರಣ ನಡೆದಿತ್ತು. ಈ ಸಂಬಂಧ ಆಗ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಅದೇ ಸಂದರ್ಭದಲ್ಲೇ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದರು.ಇದೀಗ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪ ಸಾಬೀತಾದ ಹಿನ್ನಲೆಯಲ್ಲಿ 20 ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ