ಮಂಡ್ಯ:ನಿಷೇಧಾಜ್ಞೆ ಉಲ್ಲಂಘಿಸಿ 2017ರಲ್ಲಿ ಬೈಕ್ ರ್ಯಾಲಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಮಂಡ್ಯ ಬಿಜೆಪಿಯ 17 ಮಂದಿ ಕಾರ್ಯಕರ್ತರಿಗೆ ಪಾಂಡವಪುರ JMFC ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಈ ಕಾರ್ಯಕರ್ತರು ಎಸ್ಡಿಪಿಐ, ಪಿಎಫ್ಐ ಸಂಘಟನೆಗಳ ವಿರುದ್ಧದ ಪ್ರತಿಭಟನೆಗೆ ಮಂಗಳೂರಿಗೆ ಹೊರಟಿದ್ದರು. ಪಾಂಡವಪುರದಿಂದ ಮಂಗಳೂರಿಗೆ ಬೈಕ್ ಱಲಿ ಮೂಲಕ ಹೊರಟಿದ್ದರು. ಇದೇ ವೇಳೆ ಪಾಂಡವಪುರದಲ್ಲಿ ಪ್ರತಿಭಟನಾಕಾರರನ್ನು ತಡೆದಿದ್ದ ಪೊಲೀಸರು, ಎಫ್ಐಆರ್ ದಾಖಲಿಸಿ ನಂತರ ಚಾರ್ಜ್ಶೀಟ್ ಸಲ್ಲಿಸಿದ್ದರು.