ದೇಶದಲ್ಲಿ ಕೊವಿಡ್ ವೈರಸ್ನ ರೂಪಾಂತರಿ ತಳಿ JN.1 ದಿನೇದಿನೇ ಹೆಚ್ಚುತ್ತಿದ್ದು, ಈಗಾಗಲೇ ಇದು ಸಮುದಾಯಕ್ಕೆ ಹರಡಿರುವ ಸಾಧ್ಯತೆಯಿದೆ ಎಂದು ತಜ್ಞರು ಹೇಳಿದ್ದಾರೆ. ಭಾರತೀಯ ರಾಷ್ಟ್ರೀಯ ವೈದ್ಯಕೀಯ ಸಂಘದ ಕೊವಿಡ್ ಟಾಸ್ಕ್ಫೋರ್ಸ್ ಉಪಾಧ್ಯಕ್ಷ ಡಾ.ರಾಜೀವ್ ಜಯದೇವನ್ ಹಾಗೂ ವಿಶ್ವ ಆರೋಗ್ಯ ಸಂಸ್ಥೆಯ ಮಾಜಿ ಮುಖ್ಯ ವಿಜ್ಞಾನಿ ಡಾ.ಸೌಮ್ಯಾ ಸ್ವಾಮಿನಾಥನ್ ಈ ಕುರಿತು ಎಚ್ಚರಿಕೆ ನೀಡಿದ್ದಾರೆ.ಡಾ.ಜಯದೇವನ್ ಮತನಾಡಿ, ಕೇರಳದ ಕೊಚ್ಚಿಯಲ್ಲಿ ಇನ್ ಫ್ಲುಯೆಂಜಾ ಲಕ್ಷಣಗಳಿರುವವರನ್ನು ಪರೀಕ್ಷೆಗೊಳಪಡಿಸಿದಾಗ ಶೇ.30ರಷ್ಟು ಮಂದಿಗೆ ಪಾಸಿಟಿವ್ ಬಂದಿದೆ. ಇದು