ಇಎಸ್ಐಸಿ ಆಸ್ಪತ್ರೆಯಲ್ಲಿ ಜೂನ್ ಅಂತ್ಯದೊಳಗೆ ಕೋವಿಡ್ ಲ್ಯಾಬ್ ಕಾರ್ಯಾರಂಭ ಮಾಡಬೇಕಿತ್ತು. ಆದರೆ ತಪಾಸಣೆಗೆ ಬೇಕಾದ ಯಂತ್ರಗಳೇ ಬರುತ್ತಿಲ್ಲ. ಶೀಘ್ರದಲ್ಲೇ ಕಲಬುರಗಿ ನಗರದ ಇಎಸ್ಐಸಿ ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕು ಪತ್ತೆ ಮಾಡುವ ಪ್ರಯೋಗಾಲಯ ಆರಂಭಿಸಲಾಗುತ್ತಿದೆ ಎಂದು ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ್ ತಿಳಿಸಿದ್ದಾರೆ.ವಿಧಾನಪರಿಷತ್ ಸದಸ್ಯ ಬಿ.ಜಿ. ಪಾಟೀಲ್ ಅವರ ಜೊತೆ ಇಎಸ್ಐಸಿ ಅಸ್ಪತ್ರೆಗೆ ಭೇಟಿ ನೀಡಿ ಪ್ರಯೋಗಾಲಯ ಸ್ಥಾಪನೆ ಕುರಿತು ದೆಹಲಿಯ ಕಾರ್ಮಿಕ ಮಂತ್ರಾಲಯ ಸೇರಿದಂತೆ ಇನ್ನಿತರರೊಂದಿಗೆ ನಡೆಸಲಾದ