ಮಾನವನ ಪ್ರಾಣ ಹೊರಟುಹೋದರೆ ಉಳಿದ ಅಂಗಾಂಗಗಳು ನಿಷ್ಕ್ರಿಯವಾಗುತ್ತವೆ. ಹಾಗೆಯೇ ಗೋವಿನ ಹತ್ಯೆ ಸರ್ವನಾಶಕ್ಕೆ ಕಾರಣವಾಗುತ್ತದೆ. ಗೋವು ಸೃಷ್ಟಿಯ ಅಂಗ, ಉತ್ತಮಾಂಗ ಮಾತ್ರವಲ್ಲ ಮುಖ್ಯಾಂಗ ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ವಿಶ್ಲೇಷಿಸಿದರು. ಮರದಲ್ಲಿ ಕುಳಿತು ಕೊಡಲಿಯಿಂದ ಬುಡವನ್ನು ಕಡಿದು ಸಂಭವಿಸಬಹುದಾದ ಅನಾಹುತದಂತೆ ಗೋ ಹತ್ಯೆ ಮೂಲಕ ಮೂರ್ಖತನವನ್ನು ಪ್ರದರ್ಶಿಸಲಾಗುತ್ತಿದೆ. ಗೋಹತ್ಯೆ ಎಂದರೆ ಸ್ವ-ಹತ್ಯೆ. ಗೋ ಸೇವೆ ಎಂದರೆ ಒಂದರ್ಥದಲ್ಲಿ ವೇದ ಸೇವೆ. ವೇದಗಳಲ್ಲಿ ಗೋವಿನ ಮಹತ್ವದ ಬಗ್ಗೆ