ಬಿಜೆಪಿಯಿಂದ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ತೀವ್ರ ನಿರ್ಲಕ್ಷ್ಯಕ್ಕೆ ಒಳಗಾಗಿದ್ದಾರೆ ಅನ್ನೋ ಮಾತುಗಳು ಮತ್ತೆ ಹರಿದಾಡಲಾರಂಭಿಸಿವೆ. ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ರನ್ನು ಬಿಜೆಪಿ ನಿರ್ಲಕ್ಷ್ಯ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರೋ ಡಿಸಿಎಂ ಅಶ್ವಥ್ ನಾರಾಯಣ್, ಬಿಜೆಪಿ ಅವರನ್ನ ನಿರ್ಲಕ್ಷ್ಯ ಮಾಡುವುದಿಲ್ಲ. ಅವರು ನಮ್ಮ ಪಕ್ಷದ ನಾಯಕರು. ಮುಂದಿನ ದಿನಗಳಲ್ಲಿ ಅವರಿಗೆ ಎಲ್ಲವೂ ಒಳ್ಳೆಯದಾಗಲಿದೆ. ಪಕ್ಷದಲ್ಲಿ ಉನ್ನತ ಸ್ಥಾನಮಾನ ಸಿಗಲಿದೆ. ಯಾರು ಕೂಡ ಈ ಬಗ್ಗೆ ಅನುಮಾನ ಪಡುವುದು ಬೇಡ ಅಂತ ಹೇಳಿದ್ದಾರೆ.ಚನ್ನಪಟ್ಟಣದಲ್ಲಿ