ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಪ್ರಕಟಣೆಯೊಂದನ್ನು ಹೊರಡಿಸಿರುವ ಅವರು, ಸಿ.ಪಿ.ಯೋಗೇಶ್ವರ್ ಜೊತೆ ನಾನು ಮಾತುಕತೆಯೇ ನಡೆಸಿಲ್ಲ. ಚುನಾವಣೆ ಸಂದರ್ಭದಲ್ಲಿ ಇಂತಹ ವದಂತಿಗಳು ಸಹಜ ಎಂದು ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಿಂದ ಯೋಗೇಶ್ವರ್ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ಎನ್ನುವ ವರದಿಯಲ್ಲಿ ಸತ್ಯಾಂಶವಿಲ್ಲ. ನನಗೆ ಗೊತ್ತಿದ್ದರೆ ಮಾಹಿತಿ ನೀಡುತ್ತಿದ್ದೆ ಎಂದು ಹೇಳಿದ್ದಾರೆ.