ಇಂದು ಭಾರತ, ನೆದರ್ಲೆಂಡ್ ಪಂದ್ಯ ಹಿನ್ನೆಲೆ ಭದ್ರತೆಯ ದೃಷ್ಟಿಯಿಂದ ಒಂದು ಸಾವಿರಕ್ಕೂ ಹೆಚ್ಚು ಪೊಲೀಸ್ ನಿಯೋಜನೆ ಮಾಡಲಾಗಿದೆ.ಕ್ರಿಕೆಟ್ ವೀಕ್ಷಣೆಗೆ ಚಿನ್ನಸ್ವಾಮಿ ಕ್ರೀಡಾಂಗಣದತ್ತ ಅಭಿಮಾನಿಗಳು ಆಗಮಿಸುತ್ತಿದ್ದಾರೆ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಭಾರತ-ನೆದರ್ಲೆಂಡ್ ನಡುವೆ ಕೊನೆಯ ಲೀಗ್ ಪಂದ್ಯ ನಡೆಯಲಿದ್ದು,ಈಗಾಗಲೇ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.ಅದೇ ರೀತಿಯಾಗಿ ಸ್ಟೇಡಿಯಂ ಸುತ್ತಮುತ್ತ ಇಂದು ಬೆಳಗ್ಗೆ 7ರಿಂದ ರಾತ್ರಿ 11 ಗಂಟೆವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.