ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ನಡೆದಿರುವ ಹಲ್ಲೆಯನ್ನ ಖಂಡಿಸಿ ವೈದ್ಯ ವಿದ್ಯಾರ್ಥಿಗಳು ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಯಚೂರು ನಗರದ ಹೊರವಲಯದಲ್ಲಿರುವ ರಿಮ್ಸ್ ಆಸ್ಪತ್ರೆಯಲ್ಲಿ ನಿನ್ನೆ ತಡರಾತ್ರಿ ರೋಗಿ ಸಂಬಂಧಿಕರು ವೈದ್ಯ ವಿದ್ಯಾರ್ಥಿ(ಇಂಟರ್ನಿ) ಇಬ್ಬರ ಮೇಲೆ ಹಲ್ಲೆ ನಡೆಸಿದ್ದು, ಇದರಿಂದ ಇಬ್ಬರು ಗಾಯಗೊಂಡಿದ್ದಾರೆ. ಹೀಗಾಗಿ ಹಲ್ಲೆಯನ್ನು ಖಂಡಿಸಿ ವಿದ್ಯಾರ್ಥಿಗಳು ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ ಮಾಡಿ, ಹಲ್ಲೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಇನ್ನೂ ನಿನ್ನೆ ರಾತ್ರಿ ವೇಳೆ ನರಸಿಂಹಲು