ನಿರಂತರವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆಗೆ ರಾಜ್ಯದಲ್ಲಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಕಳೆದರಡು ದಿನಗಳಿಂದ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದಾಗಿ ಕೃಷಿಗಾರಿಕೆಯಲ್ಲಿ ಬಹಳಷ್ಟು ನಷ್ಟ ಸಂಭವಿಸಿದೆ. ಕಳೆದ 3 ದಿನಗಳಿಂದ ಮುಂಗಾರು ಚುರುಕುಗೊಂಡಿದ್ದು ಕೃಷಿ ಭೂಮಿಗೆ ನೆರೆ ನೀರು ನುಗ್ಗಿದೆ. ಅತಿವೃಷ್ಟಿಯಿಂದ ಗದ್ದೆಯಲ್ಲಿ ಬಿತ್ತನೆ ಮಾಡಿದ ಬೀಜಗಳು ನೆರೆಯ ಪಾಲಾಗಿದ್ದು, ರೈತರು ಕಂಗಾಲಾಗಿದ್ದಾರೆ.