ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿರುವುದು ಬೆಚ್ಚಿ ಬೀಳಿಸಿದೆ.ಚುನಾವಣೆಗೆ ಒಂದೆಡೆ ರಾಜಕೀಯ ಪಕ್ಷಗಳು ಭರ್ಜರಿ ಕ್ಯಾಂಪೇನ್ ನಡೆಸುತ್ತಿದ್ದರೆ ಇತ್ತ ಐಟಿ ಇಲಾಖೆಯ ಅಧಿಕಾರಿಗಳು ಚುನಾವಣೆಗೆ ಹಣ ಸಾಗಿಸುವವರ ಮೇಲೆ ಕಣ್ಣಿಟ್ಟಿದ್ದಾರೆ. ಹೀಗಿರುವಾಗ ಗುತ್ತಿಗೆದಾರರಿಂದ ಕಂತೆ ಕಂತೆ ಹಣ ಪಡೆಯುತ್ತಿದ್ದ ಗ್ರಾಮೀಣಾಭಿವೃದ್ದಿ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ನಾರಾಯಣಗೌಡ ಪಾಟೀಲ್ ಐಟಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಗುತ್ತಿಗೆದಾರರಿಂದ ಕೋಟಿ ಕೋಟಿ ಹಣ ಪಡೆಯುತ್ತಿದ್ದ ನಾರಾಯಣಗೌಡ ಪಾಟೀಲ್ ಬೆಂಗಳೂರಿನ ಆನಂದ್ ರಾವ್ ಸರ್ಕಲ್