2022 ಮುಗಿದು ನೂತನ ವರ್ಷಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾದ್ಯಂತ ಸಂಭ್ರಮಾಚರಣೆಗಳು ಜೋರಾಗಿ ನಡೆದಿದ್ದು ಪ್ರವಾಸಿ ತಾಣಗಳು ತುಂಬಿ ತುಳುಕುತ್ತಿವೆ. ವರ್ಷರಂಭ ಭಾನುವಾರವೇ ಬಂದ ಹಿನ್ನೆಲೆಯಲ್ಲಿ ರಜೆ ಜೊತೆಗೆ ನ್ಯೂ ಇಯರ್ ಸೆಲೆಬ್ರೇಷನ್ಗೆ ಹೊಸ ಕಳೆ ಬಂದಂತಿತ್ತು. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ, ಹಿಮವದ್ ಗೋಪಾಲಸ್ವಾಮಿ ಬೆಟ್ಟ, ಯಳಂದೂರಿನ ಬಿಳಿಗಿರಿರಂಗನನಾಥ ದೇವಾಲಯ, ಚಾಮರಾಜನಗರ ತಾಲೂಕಿನ ಕೆ.ಗುಡಿ, ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಜನಸಾಗರವೇ ಹರಿದುಬಂದಿದೆ. ವರ್ಷದ ಕೊನೆಯ ದಿನವಾದ ಶನಿವಾರ ಮಲೆಮಹದೇಶ್ವರ