ಕ್ರೂಸರ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಒಂದೇ ಕುಟುಂಬದ 8 ಮಂದಿ ಮೃತಪಟ್ಟಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಡೋಗೀನಾಲಾ ಬಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು, ನಾಲ್ವರು ಮಹಿಳೆಯರು ಸೇರಿದಂತೆ ಒಟ್ಟು 8 ಜನ ಸಾವನ್ನಪ್ಪಿದ್ದಾರೆ. ಮೃತರೆಲ್ಲರು ಮಹಾರಾಷ್ಟ್ರದ ಉಸ್ಮಾನಾಬಾದ್ ಜಿಲ್ಲೆಯ ಕಣಗರಾ ಗ್ರಾಮದವರಾಗಿದ್ದು, ಮೃತರು ಗುರುಪೂರ್ಣಿಮೆಯ ನಿಮಿತ್ತ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಒಂದೇ ಕುಟುಂಬದ