ವಿಧಾನಸಭೆ ಚುನಾವಣೆ ಬಳಿಕ ಬಿಜೆಪಿ ಎಚ್ವೆತ್ತುಕೊಂಡಿರೋ ಹಾಗಿದೆ. ಕರ್ನಾಟಕ ಲೋಕಸಭಾ ಚುನಾವಣೆಯಲ್ಲಿ ಶತಾಯ ಗತಾಯ ಸ್ಥಾನ ಹೆಚ್ಚಿಸಿಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಸಾಕಷ್ಟು ಬದಲಾವಣೆಯತ್ತ ಚಿತ್ತ ಹರಿಸಿದೆ. ಕರ್ನಾಟಕ ಅಷ್ಟೆ ಅಲ್ಲದೆ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಪದಾಧಿಕಾರಿಗಳನ್ನ ಬದಲಾವಣೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಕರ್ನಾಟಕದ ಸಿ.ಟಿ ರವಿ ಅವರಿಗೆ ಕೊಕ್ ನೀಡಿದೆ. ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಇದೀಗ ಬಿಜೆಪಿ ಲೋಕಸಭಾ ಚುನಾವಣೆಗೆ ಒಂದಿಷ್ಟು ತಂತ್ರಗಳನ್ನು ಮಾಡ್ತಾ