ಚಿಕಿತ್ಸೆಗೆ ಒಳಗಾಗಿದ್ದ ಕೋವಿಡ್-19 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವುದು ಸಚಿವರೊಬ್ಬರಿಗೆ ನೆಮ್ಮದಿ ನೀಡಿದೆ. ಕೋವಿಡ್-19 ಸೋಂಕು ತಡೆ ಕುರಿತು ಗದಗ ಜಿಲ್ಲೆಯ ಸಾರ್ವಜನಿಕರು, ಯುವಜನರ ಮತ್ತು ಅಧಿಕಾರಿ ಸಿಬ್ಬಂದಿಯಾದಿಯಾಗಿ ಸರ್ವರೂ ಹೆಚ್ಚಿನ ಜವಾಬ್ದಾರಿಯಿಂದ ಜೀವನ ನಡೆಸಬೇಕಾದ ಅಗತ್ಯವಿದೆ ಎಂದು ರಾಜ್ಯದ ಗಣಿ ಭೂವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದ್ದಾರೆ.ಕೋವಿಡ್-19 ಸೋಂಕಿನ ತಡೆ ಮತ್ತು ನಿಯಂತ್ರಣ ಕುರಿತು ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ,