ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತರಕಾರಿಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇರುವುದು ಮಧ್ಯಮ ವರ್ಗದ ಜನರಿಗೆ ದೊಡ್ಡ ಆಘಾತ ನೀಡಿದಂತಾಗಿದೆ. ಅಡುಗೆಯಲ್ಲಿ ಹೆಚ್ಚು ಬಳಕೆಯಾಗುವ ಟೊಮೆಟೊ ಬೆಲೆ ವಾರದಿಂದ ಹೆಚ್ಚಾಗುತ್ತಿದ್ದು, ಇಂದು ಕೆಜಿ ಟೊಮೆಟೊ ಬೆಲೆ 80 ರಿಂದ 90 ರೂಪಾಯಿಗೆ ಮಾರಾಟವಾಗುತ್ತಿದ್ದು, ಕೆಲವೆಡೆ 100ರ ಗಡಿಯನ್ನ ದಾಟಿದೆ. ಮಾರುಕಟ್ಟೆಯಲ್ಲಿ ಬೇಡಿಕೆಗೆ ತಕ್ಕಂತೆ ಟೊಮೆಟೊ ಪೂರೈಕೆಯಾಗದಿರುವುದೇ ಬೆಲೆ ಹೆಚ್ಚಾಗುತ್ತಿರುವುದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಈ ಹಿಂದೆ ಟೊಮೆಟೊ ಬೆಳೆದು ಬೆಲೆ