ಗ್ರಾಮೀಣ ಭಾಗದ ವಿದ್ಯುತ್ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಬೆಸ್ಕಾಂ ವ್ಯಾಪ್ತಿಯ 104 ಗ್ರಾಮಗಳಲ್ಲಿ ಇಂದು ಏರ್ಪಡಿಸಿದ್ದ ಮೊದಲ ವಿದ್ಯುತ್ ಅದಾಲತ್ಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ತಾವು ಎದುರಿಸುತ್ತಿರುವ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಕುರಿತು ಹಿರಿಯ ಅಧಿಕಾರಿಗಳ ಗಮನಸೆಳೆದರು.ಹೆಚ್ಚುವರಿ ಕಾರ್ಯನಿರ್ವಾಹಕ ಅಭಿಯಂತರಿಂದ ಹಿಡಿದು ಬೆಸ್ಕಾಂ ನಿಗಮ ಕಚೇರಿಗಳ ಹಿರಿಯ ಅಧಿಕಾರಿಗಳು ಬೆಸ್ಕಾಂ ವ್ಯಾಪ್ತಿಯಲ್ಲಿ ನಡೆದ ಮೊದಲ ವಿದ್ಯುತ್ ಅದಾಲತ್ ನಲ್ಲಿ ಭಾಗವಹಿಸಿ ಜನರ ಅಹಾವಾಲುಗಳನ್ನು ಸ್ವೀಕರಿಸಿದರು. ಹೊಸ ಪರಿವರ್ತಕಗಳು, ಹೆಚ್ಚುವರಿ