ಸಿಲಿಂಡರ್ ಸ್ಪೋಟಗೊಂಡು ಐದು ಮಂದಿಗೆ ಗಾಯವಾಗಿರುವ ಘಟನೆ ನಡೆದಿದೆ.ಹಾಸನ ಜಿಲ್ಲೆಯ ಹೊಳೇನರಸೀಪುರ ಪಟ್ಟಣದ ಚೌಡೇಶ್ವರಿ ದೇವಸ್ಥಾನದ ಬಳಿ ಘಟನೆ ನಡೆದಿದೆ.ಪುರುಷೋತ್ತಮ್ ಎಂಬುವವರ ಮನೆಯ ಅಡುಗೆ ಮನೆಯಲ್ಲಿ ಸ್ಪೋಟಗೊಂಡ ಸಿಲಿಂಡರ್ ಸ್ಫೋಟದ ತೀವ್ರತೆಗೆ ಕಿಟಕಿ ಗಾಜು ಪುಡಿ ಪುಡಿಯಾಗಿವೆ. ಮನೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ.ಗಾಯಾಳುಗಳನ್ನು ಮೈಸೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಹೊಳೇನರಸೀಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.