ಮನೆಯಲ್ಲಿದ್ದ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸ್ಟೋಟಗೊಂಡ ಪರಿಣಾಮ ಮನೆಯಲ್ಲಿದ್ದ 6 ಮಂದಿಗೆ ಸುಟ್ಟ ಗಾಯಗಳಾಗಿ ಆಸ್ಪತ್ರೆ ಸೇರಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರದಲ್ಲಿ ನಡೆದಿದೆ. ಗಾಯಾಳುಗಳನ್ನ ವಿಜಯ್, ಬಲಭೀಮ, ಕಾಶಿನಾಥ್, ರಾಜಶೇಖರ್ , ಗಣೇಶ್, ಫಾತೀಮಾ ಎಂದು ಗುರುತಿಸಲಾಗಿದೆ. ಗಾಯಗೊಂಡವರು ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಕಾರ್ಮಿಕರಾಗಿದ್ದಾರೆ. ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆ ಅನಿಲ ಸೋರಿಕೆಯಾಗಿದ್ದು, ಇದನ್ನ ಗಮನಿಸದೇ ಸ್ವವ್ ಹಚ್ಚಲು ಹೋದ ವೇಳೆಯಲ್ಲಿ ಸಿಲಿಂಡರ್ ಸ್ಪೋಟವಾಗಿದೆ.