ರಾಜ್ಯದಲ್ಲಿ ಎಂಇಎಸ್ (MES) ಪುಂಡಾಟ ಮೆರೆಯುತ್ತಿದ್ದು, ಕನ್ನಡಿಗರ (Kannadiga) ಮೇಲೆ ಹಲ್ಲೆ ಆಸ್ತಿ-ಪಾಸ್ತಿಗಳ ಮೇಲೆ ಮನಬಂದತೆ ದಾಳಿ ಮಾಡುತ್ತಿರುವುದನ್ನು ವಿರೋಧಿಸಿ ಇದೇ ಡಿ.31 ರಂದು ಕರ್ನಾಟಕ ಬಂದ್ಗೆ (Karnataka Bandh) ಕರೆ ನೀಡಲಾಗಿದೆ.ಬೆಂಗಳೂರಿನ (Bengaluru) ಟೌನ್ ಹಾಲ್ನಲ್ಲಿ 5 ಲಕ್ಷ ಜನ ಸೇರಿಸಿ ಕನ್ನಡಿಗರ ಶಕ್ತಿ ಪ್ರದರ್ಶನ ಮಾಡುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಡಿ.31 ರಂದು ಎಲ್ಲರೂ ಕನ್ನಡಿಗರೂ ಒಗ್ಗಟ್ಟಾಗಿ ಬಂದ್ಗೆ ಸಾಥ್ ನೀಡಬೇಕು ಎಂದು ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಬೆಂಗಳೂರು ಟೌನ್ ಹಾಲ್ ಇಂದ ಬಂದ್ ಪ್ರಕ್ರಿಯೆಗಳು ಆರಂಭವಾಗಲಿದೆ. ಎಲ್ಲರೂ ಇದಕ್ಕೆ ಸಾಥ್ ನೀಡಿ ಕನ್ನಡಿಗರೆಲ್ಲರೂ ಒಗ್ಗಟ್ಟಾಗಿ 31ಕ್ಕೆ ಸಂಪೂರ್ಣ ಬಂದ್ ಮಾಡಬೇಕೆಂದು ಹೇಳಿವೆ.ಬೀದಿ ಬದಿ ವ್ಯಾಪಾರಿಗಳ ಕರ್ನಾಟಕ ಬಂದ್ ಗೆ (Karnataka Bandh) ಕರ್ನಾಟಕ ರಾಜ್ಯಾದ್ಯಂತ ಬೀದಿಬದಿ ವ್ಯಾಪಾರಿಗಳ ಬೆಂಬಲ ನೀಡುತ್ತಿದ್ದು, ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ರಂಗಸ್ವಾಮಿ (Rangaswamy) ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. 31 ರಂದು ಕರ್ನಾಟಕ ಬಂದ್ ಕರೆ ನೀಡಲಾಗಿದ್ದು ಎಂಇಎಸ್ ಪುಂಡರ ಪುಂಡಾಟಿಕೆ ಮಟ್ಟ ಹಾಕಲು ನಡೆಯುತ್ತಿರುವ ಪ್ರತಿಭಟನೆಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದ್ದಾರೆ