ಇಂಧನ ಖಾತೆ ಸಚಿವರಾದ ಡಿ.ಕೆ.ಶಿವಕುಮಾರ್ ಅಗರ್ಭ ಶ್ರೀಮಂತರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸಚಿವ ಡಿ.ಕೆ.ಶಿವಕುಮಾರ್ ಹಲವಾರು ವ್ಯವಹಾರಗಳನ್ನು ಹೊಂದಿದ್ದಾರೆ. ವ್ಯವಹಾರಗಳಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿರಬಹುದು ಎಂದು ತಿಳಿಸಿದ್ದಾರೆ. ಯಾವುದೇ ದಾಖಲೆಗಳಿಲ್ಲದೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸುವುದಿಲ್ಲ. ಐಟಿ ದಾಳಿ ರಾಜಕೀಯ ಪ್ರೇರಿತ ಎನ್ನುವುದು ಸತ್ಯಕ್ಕೆ ದೂರವಾದ ಸಂಗತಿ. ವಿಪಕ್ಷಗಳ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ಮಾಹಿತಿ ನೀಡಿದ್ದಾರೆ.