ಜೆಡಿಎಸ್ ಭಿನ್ನಮತಿಯ ಶಾಸಕರಿಗೆ ಹಣದ ಆಮಿಷ ನೀಡಿರುವ ವಿಚಾರವಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನನ್ನನ್ನು ಕೆಣಕದಿದ್ದರೆ ನಿದ್ದೆ ಬರುವುದಿಲ್ಲ ಎಂದು ಕಾಣಿಸುತ್ತದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನನ್ನನ್ನು ಕೆಣಕದಿದ್ದರೆ ನಿದ್ರೆ ಬರುವುದಿಲ್ಲ ಎಂದು ಕಾಣಿಸುತ್ತದೆ. ಕಾಮಾಲೆ ಕಣ್ಣಿಗೆ ಕಾಣೋದೆಲ್ಲ ಹಳದಿ ಎಂಬಂತೆ ಅವರ ಬುದ್ದಿ ಎಂದು ಲೇವಡಿ ಮಾಡಿದರು. ಕುಮಾರಸ್ವಾಮಿ ಅವರು ಒಬ್ಬ