ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 21ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರದಲ್ಲಿ ಮಳೆಯಾಗಲಿದೆ. ಈಗಾಗಲೇ ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ 5.8 ಕಿಲೋ ಮೀಟರ್ ಎತ್ತರದ ಸುಳಿಗಾಳಿ ಕರ್ನಾಟಕ ಕರಾವಳಿಯ ವಿರುದ್ಧ ದಿಕ್ಕಿನಲ್ಲಿ ಸಾಗಿದ್ದರಿಂದ ಅದರ ಪ್ರಭಾವ ಉಂಟಾಗುವುದಿಲ್ಲ. ಉತ್ತರ ಒಳನಾಡಿನಲ್ಲಿ ಒಂದೆರಡು ಕಡೆಗಳ ಮಳೆ