ತುಮಕೂರು: ದ.ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಂಸಾಚಾರಗಳಿಗೆ ರಾಜ್ಯದ ಸಚಿವ ಬಿ. ರಮಾನಾಥ್ ರೈ ಅವರ ಕುಮ್ಮಕ್ಕೇ ಕಾರಣ ಎಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಗಂಭೀರ ಆರೋಪ ಮಾಡಿದ್ದಾರೆ.ರಾಜಕೀಯ ಲಾಭಗಳಿಗಾಗಿ ಸಚಿವರು ಕೋಮು ಗಲಭೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಆದರೆ ಬಿಜೆಪಿ ಮತ್ತು ಆರ್ ಎಸ್ಎಸ್ ಕಾರ್ಯಕರ್ತರು ಕಾನೂನು ಕೈಗೆತ್ತಿಕೊಳ್ಳುವುದಿಲ್ಲ. ಆದರೆ ರಕ್ಷಣೆ ಸಿಗದಿದ್ದರೆ, ನಮ್ಮನ್ನು ರಕ್ಷಿಸಿಕೊಳ್ಳುವ ತಾಕತ್ತು ನಮಗಿದೆ ಎಂದು ಸದಾನಂದ ಗೌಡರು ತುಮಕೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.ಮುಖ್ಯಮಂತ್ರಿ ಸಿದ್ಧರಾಮಯ್ಯ