ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ನಾಯಕರಿಗೆ ಮೀಟರಿಲ್ಲ ಎನ್ನುವ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರದ ಮದದಲ್ಲಿರುವ ಸಿಎಂ ಸಿದ್ದರಾಮಯ್ಯಗೆ ತಾನೇನು ಮಾತನಾಡುತ್ತಿದ್ದೇನೆ ಎನ್ನುವ ಅರಿವು ಕೂಡಾ ಇಲ್ಲ. ವಿಪಕ್ಷಗಳ ವಿರುದ್ಧ ತಪ್ಪು ಪದಗಳ ಬಳಕೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಸ್ವಪಕ್ಷೀಯರ ಆರೋಪಗಳನ್ನು ತಡೆದುಕೊಳ್ಳಲು ಸಿಎಂ ಸಿದ್ದರಾಮಯ್ಯಗೆ ಆಗುತ್ತಿಲ್ಲ. ಆದ್ದರಿಂದ ಅವರ ಮನಸ್ಸು ವಿಚಲಿತವಾಗಿದೆ. ವಿಚಲಿತ