Normal 0 false false false EN-US X-NONE X-NONE ದಕ್ಷಿಣ ಕನ್ನಡ : ನಾಳೆ ದ.ಕನ್ನಡ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದು ಎಂಬುದಾಗಿ ತಿಳಿದುಬಂದಿದೆ. ದ.ಕನ್ನಡದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೊರೊನಾ ನಿಯಂತ್ರಿಸಲು ನಾಳೆ ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಮಾಡಲಾಗುವುದು ಎಂಬುದಾಗಿ ಡಿಸಿ ಸಿಂಧೂ ಬಿ.ರೂಪೇಶ್ ಮಾಹಿತಿ ನೀಡಿದ್ದಾರೆ. ಅಲ್ಲದೇ ನಾಳೆ ಅಗತ್ಯ ವಸ್ತುಗಳ ಖರೀದಿಗೂ ವಿನಾಯ್ತಿ ಇಲ್ಲ ಎಂಬುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.