ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಸಿಎಂ ಖಡಕ್ ಸೂಚನೆ ನೀಡಿದ್ದಾರೆ.ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಪ್ಪೆಕಟ್ಟೆ ಗ್ರಾಮದಲ್ಲಿ ದಲಿತ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ ನಡೆಸಲಾಗಿತ್ತು. ಇದು ಅಮಾನವೀಯ ಘಟನೆಯಾಗಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂ ಪೊಲೀಸರಿಗೆ ಸೂಚನೆ ನೀಡಿದ್ದಾರೆ.ಸಮಾಜದಲ್ಲಿ ಜಾರಿ ವೈಷಮ್ಯ ಇನ್ನೂ ಮುಂದುವರಿದಿರುವುದು ಸರಿಯಲ್ಲ. ಇಂತಹ ಕೃತ್ಯಗಳನ್ನು ವಿರೋಧಿಸಬೇಕೆಂದು ಸಿಎಂ ಟ್ವೀಟ್ ಮಾಡಿದ್ದಾರೆ.ಜೂ. 3