ಚಿಕ್ಕೋಡಿಯಲ್ಲಿ ಪ್ರವಾಹದಿಂದ ಆದ ಹಾನಿ ಕುರಿತು ವೈಮಾನಿಕ ಸರ್ವೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಕುರಿತು ಸಂಜೆ ಹೈಕಮಾಂಡ್ ನಿಂದ ಸೂಚನೆ ಬರಲಿದೆ. ಅಲ್ಲಿಯವರೆಗೂ ಕಾದು ನೋಡಿ. ನಿಮಗೂ ತಿಳಿಯಲಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ನನ್ನ ಮೇಲೆ ವಿಶ್ವಾಸ ಇದೆ. ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಕುರಿತು ಅಂತಿಮವಾಗಿ ಅವರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಅದರಂತೆ ನಾನು ನಡೆದುಕೊಳ್ಳುತ್ತೇನೆ.