ದಲಿತ ಸಮುದಾಯಕ್ಕೆ ಮೀಸಲಿಟ್ಟ ಹಣ ಗ್ಯಾರಂಟಿಗಳಿಗೆ ಬಳಕೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಚಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬ ದಲಿತ ವಿರೋಧಿ. ಅಧಿಕಾರಕ್ಕೆ ಬರಲು ಕಾಂಗ್ರೆಸ್ 5 ಗ್ಯಾರಂಟಿಗಳನ್ನು ಕೊಡ್ತು. ಗ್ಯಾರಂಟಿಗಳಿಗೆ ಹಣ ಎಲ್ಲಿಂದ ಬರುತ್ತೆ ಅಂದಾಗ, ಬಿಜೆಪಿಯ 40 ಕಮಿಷನ್ ಬೇಕಾದಷ್ಟು ಇದೆ.ಅದರಲ್ಲಿ ನಾವು ಗ್ಯಾರಂಟಿಗಳನ್ನು ಮಾಡ್ರೀವಿ ಅಂದಿದ್ರಿ. ಆದರೆ ದಲಿತರ ಹಣಕ್ಕೆ ಯಾಕೆ ನೀವು ಕನ್ನ ಹಾಕ್ತಿದ್ದೀರಿ