ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ನೀಡದೇ ಅವಮಾನಿಸಿದ ಕಾಂಗ್ರೆಸ್ ಪಕ್ಷಕ್ಕೆ ದಲಿತರ ಮತ ಹಾಕಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸ ಪುರದಲ್ಲಿ ನಡೆದ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರನ್ನು ರಾಜಕೀಯವಾಗಿ ಅವಮಾನಿಸಿದ ಕಾಂಗ್ರೆಸ್ ಪಕ್ಷಕ್ಕೆ ಮೋಸಹೋಗಿ ಕಳೆದ ಬಾರಿ ಅಧಿಕಾರ ನೀಡಲಾಗಿದೆ. ಈ ಬಾರಿ ಅಂತಹ ತಪ್ಪು ಮಾಡಬಾರದು ಎಂದಿದ್ದಾರೆ. ಕಾಂಗ್ರೆಸ್ ಪಕ್ಷ ದೇಶದಲ್ಲಿ ನೆಲಕಚ್ಚಿದ್ದು,