ಕಲಬುರಗಿ ಜಿಲ್ಲೆಯಾದ್ಯಂತ ರೈತರಿಂದ ಹೆಸರುಕಾಳನ್ನು ಆಗಸ್ಟ್ 31 ರಿಂದ ಖರೀದಿಸಲಾಗುತ್ತಿದೆ. ಸರ್ಕಾರದಿಂದ ಒಟ್ಟು 43 ಹೆಸರುಕಾಳು ಖರೀದಿ ಕೇಂದ್ರಗಳನ್ನು ತೆರೆಯಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕರ್ಫೋಸ್ ಸಮಿತಿ ಅಧ್ಯಕ್ಷ ಆರ್. ವೆಂಕಟೇಶಕುಮಾರ ತಿಳಿಸಿದ್ದಾರೆ.ಪ್ರತಿಯೊಬ್ಬ ರೈತರು 10 ಕ್ವಿಂ. ಗರಿಷ್ಟ ಪ್ರಮಾಣದಲ್ಲಿ ಹೆಸರುಕಾಳು ಪ್ರತಿ ಕ್ವಿಂಟಲ್ಗೆ 6,975 ರೂ.ಗಳ ದರದಲ್ಲಿ ತಮ್ಮ ಗ್ರಾಮಕ್ಕೆ ಹತ್ತಿರದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ. ರೈತರು ಖರೀದಿ