ಮೈಸೂರು : ಕೊರೊನಾ ಮಹಾಮಾರಿಯ ಭೀತಿಯ ನಡುವೆ ನಡೆಯುತ್ತಿರುವ ಸರಳ ದಸರಾ ದಿನೇದಿನೇ ಕಳೆಗಟ್ಟುತ್ತದೆ. ಮೈಸೂರು ಅರಮನೆಯ ಅಂಗಳದಲ್ಲಿ ನಡೆದ ಹಂಸಲೇಖ ಸಂಗೀತ ಕಾರ್ಯಕ್ರಮ ಎಲ್ಲರ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು. ತಣ್ಣನೆಯ ತಿಳಿಗಾಳಿ, ಅಲ್ಲಲ್ಲಿ ವರುಣನ ಸಿಂಚನ, ಝಗಮಗಿಸುವ ದೀಪಗಳ ನಡುವೆ ಹೊಂಬೆಳಕಿನಿಂದ ಕಂಗೊಳಿಸುತ್ತಿದ್ದ ಮೈಸೂರು ಅರಮನೆ. ಅರಮನೆ ಆವರಣದಲ್ಲಿ ಸುಶ್ರಾವ್ಯ, ಸುಮಧುರ ಹಾಡು. ಹೌದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಸಂಯೋಜಿಸಿದ ಸಂಗೀತದ ಅಲೆಗಳು ಸಂಗೀತ ರಸಿಕರ ಮನತಣಿಸುವಲ್ಲಿ