ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ವಿಜಯದಶಮಿ ಮೆರವಣಿಗೆಗೆ ಸಕಲ ಸಿದ್ದತೆಗಳು ಭರದಿಂದ ಸಾಗಿದೆ ಎಂದು ದಸರಾ ವಿಶೇಷಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಿ. ರಂದೀಪ್ ಹೇಳಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಗದ್ವಿಖ್ಯಾತ ವಿಜಯದಶಮಿಯ ಮೆರವಣಿಗೆಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ, ಅಂಬಾವಿಲಾಸ ಅರಮನೆಯಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಬರುವ ಪ್ರವಾಸಿಗರಿಗೆ ಹಾಗೂ ಗಣ್ಯರಿಗೆ ಅರಮನೆ ಪ್ರವೇಶ ಮತ್ತು ಪಾರ್ಕಿಂಗ್ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು.ಗೋಲ್ಡ್ ಕಾರ್ಡ್ ಮತ್ತು ಅಧಿಕೃತ ಟಿಕೆಟ್ ಹೊಂದಿರುವ