2 ವರ್ಷಗಳಿಗೊಮ್ಮೆ ನಡೆಯುವ ಭಾರತದ ಏರ್ ಶೋ ಏರೋ ಇಂಡಿಯಾ- 2023 ಮುಂದಿನ ವರ್ಷ ಫೆಬ್ರವರಿ 13 ರಿಂದ 17ರವರೆಗೆ ಬೆಂಗಳೂರಿನ ಯಲಹಂಕದಲ್ಲಿ ನಡೆಯಲಿದೆ ಎಂದು ರಕ್ಷಣಾ ಸಚಿವಾಲಯ ಭಾನುವಾರ ತಿಳಿಸಿದೆ. ಈ ಬಗ್ಗೆ ರಕ್ಷಣಾ ಸಚಿವಾಲಯ ಟ್ವೀಟ್ನಲ್ಲಿ ತಿಳಿಸಿದ್ದು, ಏಷ್ಯಾದಲ್ಲೇ ಅತಿದೊಡ್ಡ ಏರ್ ಶೋ ಏರೋ ಇಂಡಿಯಾ- 2023 ಘೋಷಣೆಯಾಗಿದೆ. 2023ರ ದ್ವೈವಾರ್ಷಿಕ ವೈಮಾನಿಕ ಪ್ರದರ್ಶನ ಕರ್ನಾಟಕದ ಬೆಂಗಳೂರಿನ ಯಲಹಂಕದ ವಾಯುಪಡೆ ನಿಲ್ದಾಣದಲ್ಲಿ ನಡೆಯಲಿದೆ ಎಂದು ತಿಳಿಸಿದೆ. ಇದು