ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದ ಮೂಲಕ ರಾಜ್ಯದ ಹಗಲು ದರೋಡೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಹಾಸನದ ಹಳೇಬೀಡಿನಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರಕಾರ ಹಗಲುದರೋಡೆಗಿಳಿದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ದಿವಾಳಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ತುಘಲಕ್ ದರ್ಬಾರ್ನಿಂದಾಗಿ ಸರಕಾರ ಬೆಂಗಳೂರಿನ ಕಾರ್ನರ್ಸೈಟ್ಗಳನ್ನು ಅಡವಿಟ್ಟು ಸಾಲ ಮಾಡುವ ಮಟ್ಟಕ್ಕೆ ಬಂದು ನಿಂತಿದೆ. ಇದೊಂದು ದೇಶದಲ್ಲಿಯೇ ಭ್ರಷ್ಟ ಸರಕಾರವಾಗಿದೆ ಎಂದು ಕಿಡಿಕಾರಿದ್ದಾರೆ.