ರಾಜಧಾನಿ ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸಿದ ಬೆನ್ನಲ್ಲೇ ರಾಜ್ಯದ ಮತ್ತೊಂದು ಜಿಲ್ಲೆಯಲ್ಲಿ ಲಾಕ್ ಡೌನ್ ಆದೇಶ ಹೊರಡಿಸಲಾಗಿದೆ. ಕಲಬುರಗಿ ನಗರದಲ್ಲಿಯೂ ಲಾಕ್ ಡೌನ್ ಘೋಷಣೆ ಮಾಡಿ ಜಿಲ್ಲಾಧಿಕಾರಿ ಬಿ.ಶರತ್ ಆದೇಶ ಹೊರಡಿಸಿದ್ದಾರೆ.ಕೊರೊನಾ ಕೇಸ್ ಗಳು ಹೆಚ್ಚಾಗುತ್ತಿರುವಂತೆ ಜಿಲ್ಲಾ ಮಟ್ಟದ ಕೋವಿಡ್ ನಿರ್ವಹಣಾ ಸಮಿತಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಕನಿಷ್ಟ ಒಂದು ವಾರ ಲಾಕ್ ಡೌನ್ ಜಾರಿಗೊಳಿಸಲು ತೀರ್ಮಾನಿಸಲಾಗಿದೆ.ಕಲಬುರಗಿ ನಗರಕ್ಕೆ ಸೀಮಿತವಾದಂತೆ ಲಾಕ್ ಡೌನ್ ಜಾರಿಗೊಳಿಸಲು