ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಮಳೆ ಕೊರತೆಯಿಂದಾಗಿ ತಾಲೂಕಿನಲ್ಲಿ ಕೇವಲ ಪ್ರತಿಶತ 28 ರಷ್ಟು ಬಿತ್ತನೆಯಾಗಿದೆ. ಬಿತ್ತನೆ ಹಾಗೂ ಮಳೆಯ ಅಭಾವವನ್ನಾಧರಿಸಿ ಬರ ಪೀಡಿತ ತಾಲೂಕು ಘೋಷಿಸಲು ಸರಕಾರಕ್ಕೆ ಮನವಿ ಸಲ್ಲಿಸುವಂತೆ ಡಿಸಿ ಸೂಚನೆ ನೀಡಿದ್ದಾರೆ.ಕಲಬುರಗಿ ಜಿಲ್ಲೆಯ ಆಳಂದ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬರ ಪರಿಸ್ಥಿತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ